ದೆಹಲಿಯಲ್ಲಿ ಐಸಿಸ್ ಉಗ್ರನ ಸೆರೆ: ವಿಧ್ವಂಸಕ ಕೃತ್ಯ ನಡೆಸಲು ಸಂಗ್ರಹಿಸಿದ್ದ ಭಾರಿ ಪ್ರಮಾಣದ ಸ್ಫೋಟಕ ವಶ

ನವದೆಹಲಿ: ಸುಧಾರಿತ ಸ್ಫೋಟಕ ಹೊಂದಿದ್ದ ಐಸಿಸ್ ಉಗ್ರನನ್ನು ದೆಹಲಿಯ ರಿಡ್ಜ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ರಾತ್ರಿ ಪೊಲೀಸರು ಮತ್ತು ಉಗ್ರನ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬಳಿಕ ಐಸಿಸ್ ನಂಟು ಹೊಂದಿದ್ದ ಉತ್ತರ ಪ್ರದೇಶ ಮೂಲದ ಅಬ್ದುಲ್ ಯೂಸೂಫ್ ಎಂಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ. ಆತನಿಂದ ಭಾರಿ ಪ್ರಮಾಣದ ಸ್ಫೋಟಕ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಗ್ರರು ದೆಹಲಿಯಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದ್ದು, ಅದನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ದೆಹಲಿಯಲ್ಲಿ ಇನ್ನಷ್ಟು ಉಗ್ರರು ಅಡಗಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.