ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ಯಾಲೆಸ್ತೀನ್ ಅನ್ನು ಸ್ವತಂತ್ರ ರಾಷ್ಟ್ರವೆಂದು ಗುರುತಿಸಲು ಹಲವು ದೇಶಗಳು ಸಿದ್ಧತೆ ನಡೆಸಿರುವ ಮಧ್ಯೆಯೇ ಇಸ್ರೇಲ್ ನಡೆಸಿದ ದಾಳಿಗೆ ಗಾಜಾದಲ್ಲಿ ಮಕ್ಕಳು, ಮಹಿಳೆಯರು ಸೇರಿ 34 ಜನರು ಮೃತಪಟ್ಟಿದ್ದಾರೆ.
ಇಸ್ರೇಲ್ ಹಮಾಸ್ ಉಗ್ರರನ್ನು ಗುರಿಯಾಗಿಸಿದೆ ಎಂದು ಸಮರ್ಥಿಸುತ್ತಿದ್ದು, ಇತ್ತ ನಾಗರಿಕ ಪ್ರದೇಶಗಳ ಮೇಲೂ ದಾಳಿಯಾಗುತ್ತಿದೆ. ಹಮಾಸ್ನ ಸ್ನೈಪರ್ ಆಗಿದ್ದ ಮಾಜೆದ್ ಅಬು ಸೆಲ್ಮಿಯಾರನ್ನು ಹತ್ಯೆಗೈಯಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಆದರೆ ಇದನ್ನು ಶೀಫಾ ಆಸ್ಪತ್ರೆಯ ನಿರ್ದೇಶಕ ಡಾ.ಮೊಹಮ್ಮದ್ ಸೆಲ್ಮಿಯಾ ನಿರಾಕರಿಸಿದ್ದಾರೆ.












