ಕಾರ್ಕಳ: ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿರುವ ತಾಲೂಕಿನ ಕಲ್ಲೊಟ್ಟೆಯಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ.
ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದು, ಸೋಮವಾರ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.