udupixpress
Home Trending ಐಟಿ ಕಚೇರಿ ಸ್ಥಳಾಂತರ ಇಲ್ಲ, ಮಂಗಳೂರಿನಲ್ಲೇ ಮುಂದುವರಿಯಲಿದೆ: ಸಂಸದ ನಳಿನ್

ಐಟಿ ಕಚೇರಿ ಸ್ಥಳಾಂತರ ಇಲ್ಲ, ಮಂಗಳೂರಿನಲ್ಲೇ ಮುಂದುವರಿಯಲಿದೆ: ಸಂಸದ ನಳಿನ್

ಮಂಗಳೂರು: ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿ ಸ್ಥಳಾಂತರ ಆಗುವುದಿಲ್ಲ. ಅದನ್ನು ಮಂಗಳೂರಿನಲ್ಲಿಯೇ ಮುಂದುವರಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿ ಸೂಚಿಸಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್ ಕಟೀಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನನ್ನ ವೈಯಕ್ತಿಕ ಮನವಿಗೆ ಸ್ಪಂದಿಸಿದ ವಿತ್ತ ಸಚಿವೆ ಹಾಗೂ ಸಹಕರಿಸಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಡಿ.ವಿ.ಸದಾನಂದ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.