ಉಡುಪಿ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಣಿಪಾಲ, ಉಡುಪಿ (ಐ.ಟಿ.ಐ) ಸಂಸ್ಥೆಯಲ್ಲಿ 2019 ನೇ ಸಾಲಿನ ಪ್ರವೇಶಕ್ಕಾಗಿ ವಿವಿಧ ವೃತ್ತಿಗಳಲ್ಲಿ ಪ್ರವೇಶ ಬಯಸುವ ಎಸ್.ಎಸ್.ಎಲ್.ಸಿ / 10 ನೇ ತರಗತಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅಥವಾ ಮಣಿಪಾಲದ ಪ್ರಗತಿನಗರದಲ್ಲಿರುವ ಐ.ಟಿ.ಐ ಕಚೇರಿ ಸಂಸ್ಥೆಗೆ ಖುದ್ದಾಗಿ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2986145 ಅನ್ನು ಸಂಪರ್ಕಿಸುವಂತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.