ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ, ಉಡುಪಿ ಜಿಲ್ಲೆ ಇವರ
ಸಂಯುಕ್ತ ಆಶ್ರಯದಲ್ಲಿ ಹಲಸು ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟ ಮೇಳವು ಜೂನ್ 17 ರಿಂದ 19 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ನಡೆಯಲಿದೆ.
ಮೇಳದಲ್ಲಿ ಹಲಸಿನ ವಿವಿಧ ತಳಿಗಳು, ಹಲಸಿನ ಆಹಾರ ಉತ್ಪನ್ನಗಳು ಹಾಗೂ ಮೌಲ್ಯ ವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ, ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಜೇನು ಪ್ರದರ್ಶನ ಹಾಗೂ ಮಾರಾಟ, ಜಿಲ್ಲೆಯ ವಿವಿಧ ರೈತರು ಬೆಳೆಯುವ ಅಪ್ರದಾನ ಹಾಗೂ ಅಪರೂಪದ ಹಣ್ಣುಗಳು ಹಾಗೂ ಅಣಬೆಗಳನ್ನು ಮಾರಾಟ ಮಾಡಲು ಇಚ್ಛಿಸುವ ರೈತರು, ರೈತ ಸಂಘಗಳು, ರೈತ ಉತ್ಪಾದಕರ ಸಂಸ್ಥೆ ಹಾಗೂ ಸಂಸ್ಕರಣಾ ಘಟಕಗಳ ಮಾಲಕರು ಜೂನ್ 16 ರ ಒಳಗೆ ತಮ್ಮ ಉತ್ಪನ್ನ ಹಾಗೂ ಲಭ್ಯತೆಯ ವಿವರದೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ದೂ.ಸಂಖ್ಯೆ: 0820-2531950 ಅನ್ನು ಸಂಪರ್ಕಿಸಿ, ಮೇಳದಲ್ಲಿ
ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.