ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ – ಪಡುಕುತ್ಯಾರು ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮೀಜಿಯವರ19ನೇ ವರ್ಷದ ಶೋಭಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 3 ರಿಂದ ಸೆಪ್ಟೆಂಬರ್ 29 ತನಕ ಶ್ರೀ ಸರಸ್ವತೀ ಸತ್ಸಂಗ ಮಂದಿರ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇಲ್ಲಿ ಜರುಗಿದ್ದು ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆಪ್ಟೆಂಬರ್ 22ರಂದು ಶುಕ್ರವಾರ ಬೆಳಿಗ್ಗೆ 11.00 ಗಂಟೆಗೆ ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಮಹಾ ಸಂಸ್ಥಾನಕ್ಕೆ ಪ್ರಥಮ ಬಾರಿ ಆಗಮಿಸಲಿರುವ ಸಚಿವೆಯನ್ನು ಮಹಾಸಂಸ್ಥಾನದ ಸಹ ಟ್ರಸ್ಟ್ ಗಳ ಮತ್ತು ಸಮಿತಿ ಮುಖ್ಯಸ್ಥರುಗಳ, ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಮಹಾಸಂಸ್ಥಾನದ ವತಿಯಿಂದ ಅಭಿನಂದಿಸಲಾಗುವುದು.
ಈ ಸಂದರ್ಭದಲ್ಲಿ ಸಮಾಜ ಬಾಂಧವರು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಜಗದ್ಗುರುಗಳವರ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಗೌರವಾಧ್ಯಕ್ಷ ಪಿ.ವಿ. ಗಂಗಾಧರ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












