ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜನವರಿ 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 9 ಗಂಟೆಯ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಗಂಟೆ 10 ಕ್ಕೆ ಬ್ರಹ್ಮಾವರದ ಹಂದಾಡಿ ಗ್ರಾಮ ಪಂಚಾಯತ್‌ನಲ್ಲಿ ಬ್ರಹ್ಮಾವರ ತಾಲೂಕು ಡಿ.ಸಿ ಮನ್ನಾ ಭೂಮಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ, ನಂತರ ಮುರುಡೇಶ್ವರಕ್ಕೆ ತೆರಳಲಿರುವರು.