ಹೆಮ್ಮಾಡಿ: ತಾಲೂಕು ಮಟ್ಟದ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಜ.ಸ್ವ.ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಹೆಮ್ಮಾಡಿ: ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯವರು ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ.

ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ, ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ,ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವೈಷ್ಣವಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.