ವಿಶ್ವ ಗೀತಾ ಪರ್ಯಾಯಕ್ಕೆ ಜಪಾನಿನ ಗಣ್ಯರ ನಿಯೋಗದ ಆಗಮನ

ಉಡುಪಿ: ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಪುತ್ತಿಗೆ ಮಠದ ಸುಗುಣೇಂದ್ರತೀರ್ಥರ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್ ದೇಶದ ರೇವ್ ಕೋಶೋ ನಿವಾನೋ ಮತ್ತು ಅವರ ಜೊತೆಯಲ್ಲಿ ಆರು ಮಂದಿಯ ನಿಯೋಗವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ವಿಶ್ವ ಗೀತಾ ಪರ್ಯಾಯದ ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ, ಲಕ್ಷ್ಮೀ ರಂಜನ್, ಪುತ್ತಿಗೆ ಶ್ರೀಗಳ ಅಂತಾರಾಷ್ಟ್ರೀಯ ಕಾರ್ಯ ಚಟುವಟಿಕೆಗಳ ಸಂಯೋಜಕ ಡಾ. ಎ. ಕೇಶವರಾಜ್ ಮತ್ತು ಪರ್ಯಾಯ ಮಹೋತ್ಸವದ ಕಾರ್ಯಕರ್ತ, ಎ. ಮುರಳೀಧರ್ ಜಪಾನಿನಿಂದ ಆಗಮಿಸಿದ ಗಣ್ಯ ಅತಿಥಿಗಳನ್ನು ಹಾರ ಹಾಕಿ ಸ್ವಾಗತಿಸಿದರು.