ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭೇಟಿ

ಪೆರ್ಣಂಕಿಲ: ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಏ.2 ರ ವರೆಗೆ ಬ್ರಹ್ಮಕಲಶೋತ್ಸವ, ನಾಗಮಂಡಲ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಬುಧವಾರ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದರು.

ಬಳಿಕ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶಿರ್ವಾದ ಪಡೆದು ಇಂತಹ ಪುರಾತನ ದೇವಾಲಯದ ಅಂದದ ಸ್ವರೂಪ ಕಂಡು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂತೋಷ್ ಕುಲಾಲ್, ನಾಯಕ ಕೃಷ್ಣಮೂರ್ತಿ ಆಚಾರ್ಯ, ಸೌರಭ್ ಬಲ್ಲಾಳ್, ಶರತ್ ಶೆಟ್ಟಿ, ಯತೀಶ್ ಕರ್ಕೇರ, ನವೀನ್ ಸಾಲ್ಯಾನ್, ಸತೀಶ್ ಕುಮಾರ್ ಮಂಚಿ, ಗುರುದಾಸ್ ಭಂಡಾರಿ, ಲಕ್ಷ್ಮನಾರಾಯಣ ಪ್ರಭು, ಸುಧೀರ್ ನಾಯಕ್, ಪ್ರಕಾಶ್ ಶೆಟ್ಟಿ, ದಿನೇಶ್ ಪೂಜಾರಿ, ಉದಯ್ ಕುಲಾಲ್, ಸಹನಾ ಕಾಮತ್, ಸಂಧ್ಯಾ ತಿಲಕ್‌ರಾಜ್, ಅರ್ಚನಾ ದೇವಾಡಿಗ, ಸೂರಜ್, ದೇವಸ್ಥಾನದ ಸ್ವಯಂಸೇವಕ ಮಹೇಶ್ ಕುಲಕರ್ಣಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.