ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾಗಿ ಸೊಸೈಟಿಯನ್ನು ರಾಷ್ಟ್ರಮಟ್ಟದಲ್ಲಿ ಮಾದರಿ ಸಹಕಾರಿ ಸಂಸ್ಥೆಯನ್ನಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಸೇರಿದಂತೆ ರಾಷ್ಟ್ರ, ರಾಜ್ಯಮಟ್ಟದ ಹಲವಾರು ಪ್ರಶಸ್ತಿ ಪುರಸ್ಕೃತರಾದ ಅವರು ಉಡುಪಿ ತುಳು ಕೂಟದ ಅಧ್ಯಕ್ಷರಾಗಿ, ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಆಗಿ ಅನೇಕ ಸಂಘ-ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿ ಸಮಾಜಮುಖೀ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂಡಿದ್ದಾರೆ.