ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 20 ರಂದು ಕಾರ್ಕಳ
ತಾಲೂಕು ಅಜೆಕಾರು ಹೋಬಳಿಯ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಹಿರ್ಗಾನ ಗ್ರಾಮದ ಗ್ರಾಮಸ್ಥರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.