ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ವರಂಗ ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ವರಂಗ ಗ್ರಾಮಕರಣಿಕರ ಕಚೇರಿಗೆ ಮುಂಚಿತವಾಗಿ ನೀಡಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.