ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಇಂದು ಗಾಂಧಿ ಜಯಂತಿ ಆಚರಿಸಲಾಯಿತು.
ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು, ಉಪಪ್ರಾಂಶುಪಾಲರಾದ ಸಾಹಿತ್ಯ ಹಾಗೂ ಉಪನ್ಯಾಸಕ ವರ್ಗ ಉಪಸ್ಥಿತರಿದ್ದರು.
ಈ ವೇಳೆ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಗಾಂಧಿ ಜಯಂತಿಯ ಅಂಗವಾಗಿ ಕಾರ್ಕಳ ಪರ್ಪಲೆಯ ಕ್ರಿಸ್ತ ಸೇವಾಶ್ರಮಕ್ಕೆ ಭೇಟಿ ನೀಡಿ ಜ್ಞಾನಸುಧಾ ಸಂಸ್ಥೆಯ ಪರವಾಗಿ ದಿನಬಳಕೆಯ ವಸ್ತುಗಳನ್ನು ವಿತರಿಸಲಾಯಿತು. ಸಂಸ್ಥೆಯ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ. ವಿಭಾಗದ ವಿದ್ಯಾರ್ಥಿಗಳು ಸಂಸ್ಥೆಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಂಡರು.
ಇದೇ ಸಂದರ್ಭ ಎನ್.ಸಿ.ಸಿ. ಅಧಿಕಾರಿ ಸುಮಿತ್, ಮಂಜುನಾಥ್ ಮುದೂರ್ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರವಿ ಜಿ. ಉಪಸ್ಥಿತರಿದ್ದರು.