ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಜಾನಪದ ಗೀತೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಕು.ಸಿಂಚನಾ.ವಿ.ನಾಯಕ್, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಕು.ವೈಷ್ಣವಿ ಶೆಟ್ಟಿ, ರಸಪ್ರಶ್ನೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಭರತ್ ಗೌಡ ಹಾಗೂ ಪ್ರಥಮ್ ಸ್ವರೂಪ್ ಪ್ರಥಮ ಸ್ಥಾನವನ್ನು ಹಾಗೂ ಇಂಗ್ಲಿಷ್ ಆಶುಭಾಷಣದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಕು.ತನ್ವಿ ಶೆಟ್ಟಿ, ಭಕ್ತಿ ಗೀತೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕು.ಪ್ರತಿಜ್ಞಾ, ಇಂಗ್ಲಿಷ್ ಆಶುಭಾಷಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕು.ಆತ್ಮಿಕಾ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಭಾವಗೀತೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕು. ವಿಧಾತ್ರಿ.ಎಂ.ವಿ. ಹಾಗೂ ಇಂಗ್ಲಿಷ್ ಚರ್ಚಾಸ್ಪರ್ಧೆಯಲ್ಲಿ ಸಮ್ಯಕ್.ಆರ್.ಪ್ರಭು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಪ್ರಾಂಶುಪಾಲ ದಿನೇಶ್.ಎಂ.ಕೊಡವೂರ್, ಉಪಪ್ರಾಂಶುಪಾಲೆ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ ಸಹಿತ ಜ್ಞಾನಸುಧಾ ಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರ್ರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.