ಕಾರ್ಕಳ: ಪದವಿ ಪೂರ್ವಶಿಕ್ಷಣ ಇಲಾಖೆ ಹಾಗೂ ಶ್ರೀ ಶಾರದಾ ಪಿಯು ಕಾಲೇಜು ಉಡುಪಿ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಗಳಿಸಿ, ಬಾಲಕರ ತಂಡದ ಪ್ರಥಮ ವಿಜ್ಞಾನ ವಿಭಾಗದ ಶಾಶ್ವತ್.ಎಂ.ಆರ್., ಕೆ.ಗಗನ್, ಕಾರ್ತಿಕ್ ಕಾಮತ್ ಹಾಗೂ ಬಾಲಕಿಯರ ತಂಡದ ಪ್ರಥಮ ವಿಜ್ಞಾನ ವಿಭಾಗದ ಬಾಲಚನ್ನ ವೈನವಿ, ಸಂಜನಾ.ವಿ.ಬೆಸ್ಕೂರ್, ದ್ವಿತೀಯ ವಿಜ್ಞಾನ ವಿಭಾಗದ ಸಾನ್ವಿ ಶೆಟ್ಟಿ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಇದರ ಜೊತೆಗೆ ಪದವಿ ಪೂರ್ವಶಿಕ್ಷಣ ಇಲಾಖೆ ಹಾಗೂ ಶ್ರೀ ಭುವನೇಂದ್ರ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಗಳಿಸಿ, ತಂಡದ ನಾಯಕ ನಿಶಾಂತ್.ಎನ್.ಹೆಗ್ಡೆ., ಚಿಕ್ಕೋಡಿಯಲ್ಲಿ ನಡೆಯುವ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ಉಪಸ್ಥಿತರಿದ್ದರು. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆ.