ತ್ರೋಬಾಲ್-ಕರಾಟೆ ಪಂದ್ಯಾವಳಿಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವಶಿಕ್ಷಣ ಇಲಾಖೆ ಹಾಗೂ ಅದಮಾರಿನ ಪೂರ್ಣ ಪ್ರಜ್ಞಾ ಪಿಯು ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್‌ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಬಾಲಕರ ತಂಡದಿಂದ ಪ್ರಥಮ ವಿಜ್ಞಾನ ವಿಭಾಗದ ಸನತ್‌ ಪಿಡಾಯಿ ಹಾಗೂ ಬಾಲಕಿಯರ ತಂಡದ ದ್ವಿತೀಯ ವಾಣಿಜ್ಯ ವಿಭಾಗದ ಸ್ವಾತಿ ಶೆಟ್ಟಿ ಕಾರ್ಕಳ ತಂಡವನ್ನು ಪ್ರತಿನಿಧಿಸಿ ಬೆಂಗಳೂರು ಗ್ರಾಮಾಂತರದಲ್ಲಿ ನಡೆಯುವ ರಾಜ್ಯಮಟ್ಟದ ತ್ರೋಬಾಲ್‌ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಕಾರ್ಕಳ ತಾಲೂಕು ಮಟ್ಟದ ತ್ರೋಬಾಲ್‌ ಪಂದ್ಯಾಟದಲ್ಲಿ ಸವ್ಯಸಾಚಿ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇದರ ಜೊತೆಗೆ ಪದವಿ ಪೂರ್ವಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಪ್ರಥಮ ವಿಜ್ಞಾನದ ಚಂದನಾ ಗಂಗಾಧರ್‌ ನಾಯಕ್‌ ದ್ವಿತೀಯ ಸ್ಥಾನ ಗಳಿಸಿದ್ದು, ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್‌ ಜೋಳದ್‌ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸ್ತುತಿ ಜೈನ್‌.ಎಚ್‌.ಪಿ ಇವರು ಪ್ರಥಮ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲ ದಿನೇಶ್‌.ಎಂ.ಕೊಡವೂರ್‌, ಉಪಪ್ರಾಂಶುಪಾಲೆ ಸಾಹಿತ್ಯ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ಉಪಸ್ಥಿತರಿದ್ದರು.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಸುಧಾಕರ್‌ ಶೆಟ್ಟಿ ಮತ್ತು ಸಂಸ್ಥೆಯ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.