ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮವು ಡಿಸೆಂಬರ್ 14 ರಂದು ಬೆಳಗ್ಗೆ 9.30 ಕ್ಕೆ ನಗರದ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಂ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.