ಉಡುಪಿ: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಥೆರಪಿಸ್ಟ್-1 ಹುದ್ದೆಗೆ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಪದವಿ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ರೆಡ್ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂ.ಸಂ 0820-2533372, ಮೊ.ನಂ 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.