ಮಂಗಳೂರಿನಲ್ಲಿ ವಿವಿಧ ಹುದ್ದೆಗಳಿಗೆ ಸಂದರ್ಶನ

ಮಂಗಳೂರು: ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಎ.ಆರ್.ಟಿ. ಕೇಂದ್ರಕ್ಕೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

       ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು www.dkhfw.in ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ವಾಕ್-ಇನ್ ಸಂದರ್ಶನವನ್ನು  ಜೂನ್ 20 ರಂದು  ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗುತ್ತದೆ.

    ಹೆಚ್ಚಿನ ಮಾಹಿತಿಗೆ https://pilikula.karnataka.gov.in ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.