ಪತ್ರಕರ್ತ ಮಹಮ್ಮದ್ ಆರಿಫ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

 

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ  ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರಿಗೆ ಪ್ರದಾನ ಮಾಡಲಾಯಿತು.

ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.