ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸೆ.23 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ವಿಧಾನಸಭಾ ಚುನಾವಣಾ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಜನರ ವಿರುದ್ದ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿ ಚೈತ್ರಾ ಮತ್ತು ಆಕೆಯ ಸಂಗಡಿಗರನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ಬೆಂಗಳೂರಿನ 1 ನೇ ಎಪಿಎಂಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಕೋರ್ಟ್ ಸೆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಂಚನೆಯಲ್ಲಿ ಭಾಗಿಯಾದ ಇತರ ಆರೋಪಿಗಳಾದ ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್, ಧನ್ ರಾಜ್ ಅವರೆಲ್ಲರಿಗೂ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.