ಕಾಂಗ್ರೆಸ್​ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್​ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಾಳೆ ಸಂಜೆಯ ವರೆಗೆ (ಒಂದು ದಿನ) ನ್ಯಾಯಾಂಗ ಬಂಧನ ವಿಧಿಸಿ ಇಲ್ಲಿನ ಜೆಎಂಎಫ್​​ಸಿ ನ್ಯಾಯಾಲಯ ಆದೇಶ ನೀಡಿದೆ.

ಇಂದು ಸಂಜೆ ವಿನಯ್ ಕುಲಕರ್ಣಿಯನ್ನು ಬಂಧಿಸಿದ ಸಿಸಿಬಿ ಅಧಿಕಾರಿಗಳು ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡರು. ಆದರೆ ಕೋರ್ಟ್​ ವಿನಯ್ ಕುಲಕರ್ಣಿಯನ್ನು ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಹೀಗಾಗಿ ಇಂದು ರಾತ್ರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಉಳಿದುಕೊಳ್ಳಲಿದ್ದಾರೆ. ನಾಳೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ.