ಜಿ.ಪಂ/ತಾ.ಪಂ ಚುನಾವಣೆ ಕರಡು ಮತದಾರರ ಪಟ್ಟಿ ಆಕ್ಷೇಪಣೆ ಇತ್ಯರ್ಥಕ್ಕೆ ಜುಲೈ 7 ಕೊನೆ ದಿನ

ಉಡುಪಿ: ಜಿಪಂ ಮತ್ತು ತಾಪಂ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ , ಉಡುಪಿ ಕಾಪು ಕಾರ್ಕಳ ಕುಂದಾಪುರ ಬೈಂದೂರು ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕು ಕಚೇರಿಗಳಲ್ಲಿ ಸಹಾಯಕ ಆಯುಕ್ತರು ಕುಂದಾಪುರ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 4 ಹಾಗೂ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜುಲೈ 7 ಕೊನೆಯ ದಿನವಾಗಿದ್ದು , ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆ ಮಾಡಿಸಿ ಅಂತಿಮ ಚೆಕ್ ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಜುಲೈ 12 ರಂದು ಮತ್ತೊಮ್ಮೆ ಪರಿಶೀಲಿಸಲಾಗುವುದು. ಮತದಾರರ ಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ತಾಲೂಕು ವ್ಯಾಪ್ತಿಯ ತಹಶೀಲ್ದಾರ್ ಅವರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.