ಜು.16: ಚಂದ್ರಗ್ರಹಣ ಹಿನ್ನಲೆ ದೇವಸ್ಥಾನಗಳಲ್ಲಿ ದಿನನಿತ್ಯದ ಪೂಜೆಯಲ್ಲಿ ವ್ಯತ್ಯಾಸ 

ಮಂಗಳೂರು: ಜು.16ರಂದು‌ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕರಾವಳಿಯ ಪುಣ್ಯ ಕ್ಷೇತ್ರದಲ್ಲಿ ದಿನನಿತ್ಯದ ‌ಪೂಜೆಯಲ್ಲಿ ವ್ಯತ್ಯಾಸ ಉಂಟಾಗಲಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ರಾತ್ರಿ 7ಕ್ಕೆ ನಡೆಯುವ ಮಹಾಪೂಜೆ, ಸಂಜೆ 6.30ಕ್ಕೆ ನಡೆಯಲಿದೆ. ಸಂಜೆ ಆಶ್ಲೇಷಾ ಬಲಿ ಸೇವೆ, ರಾತ್ರಿಯ ಭೋಜನ ವ್ಯವಸ್ಥೆ ಇರುವುದಿಲ್ಲ. ಅಲ್ಲದೇ 7 ಗಂಟೆಯ ಅನಂತರ ದೇವಸ್ಥಾನ ಪ್ರವೇಶಿವಿಲ್ಲ. ಆದರೆ ಬೆಳಗ್ಗಿನಿಂದ ಮಧ್ಯಾಹದ ವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾತ್ರಿ ಹೂವಿನ ಪೂಜೆ, ರಂಗಪೂಜೆ ಹಾಗೂ ವಿಶೇಷ ಸೇವೆಗಳು ಮತ್ತು ರಾತ್ರಿ ಅನ್ನದಾನ ಇರುವುದಿಲ್ಲ. ಮಹಾಪೂಜೆ ಎಂದಿನಂತೆ ರಾತ್ರಿ 8 ಗಂಟೆಗೇ ನಡೆಯಲಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲೂ ಗ್ರಹಣದ ವೇಳೆ ದೇವರಿಗೆ ಶತರುದ್ರಾಭಿಷೇಕ ನಡೆಯಲಿದೆ. ರಾತ್ರಿ ಮಹಾಪೂಜೆ ಎಂದಿನಂತೆ 9 ಗಂಟೆಗೆ ನಡೆಯಲಿದೆ.
ಭಕ್ತರಿಗೆ ಅನ್ನಪ್ರಸಾದದ ಬದಲು ಫ‌ಲಾಹಾರ ವಿತರಣೆ ನಡೆಯಲಿದೆ. ಆದರೆ ಗ್ರಹಣಕಾಲದಲ್ಲಿ ದರ್ಶನಕ್ಕೆ ಅವಕಾಶವಿದೆ.
ಉಡುಪಿ ಶ್ರೀಕೃಷ್ಣ ಮಠ, ಗ್ರಹಣದ ಹೊತ್ತಿನಲ್ಲಿಯೂ ತೆರೆದಿರಲಿವೆ. ಈ ಸಂಧರ್ಭದಲ್ಲಿ ದೇವರ ದ್ಯಾನ‌ ನಡೆಯಲಿವೆ. ಗ್ರಹಣಸ ಬಳಿಕ ಅಭಿಷೇಕ, ಪೂಜೆ ನೆರವೇರಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ರಾತ್ರಿ 9 ಗಂಟೆ ತನಕವೂ ಅನ್ನದಾನ ನಡೆಯಲಿದೆ ಎನ್ನಲಾಗಿದೆ.