ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಎನ್.ಯು.ಎಲ್.ಎಮ್/ ಎನ್.ಆರ್.ಎಲ್.ಎಮ್, ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಜೂನ್ 25 ರಂದು ಬೆಳಗ್ಗೆ 9.30 ರಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ, ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತ್ತಕೋತ್ತರ ಪದವಿ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ಅಭ್ಯರ್ಥಿಗಳು https://udupi.nic.in ನಲ್ಲಿ ನೋಂದಣಿ ಮಾಡಿಕೊಂಡು, ವಿದ್ಯಾರ್ಹತೆಯ ಅಂಕಪಟ್ಟಿ, 3 ರೆಸ್ಯೂಮ್ (ಸ್ವ-ವಿವರ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9945856670, 9901481729, 9483772449, 9449943882, 9739691294, 9443409355 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.