ಬೆಂಗಳೂರು: ರಾಜ್ಯದಲ್ಲಿ ಜೂ.1ರಿಂದ ದೇವಸ್ಥಾನ, ಮಸೀದಿ, ಚರ್ಚ್ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅವರು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದರೆ, ಚರ್ಚ್ ಮತ್ತು ಮಸೀದಿಗಳಿಗೂ ಅದೇ ನೀತಿ ಅನ್ವಯ ಆಗುತ್ತದೆ ಎಂದು ತಿಳಿಸಿದರು.