ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ, ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ

ಉಡುಪಿ ಜೂನ್ 12: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಜೂನ್ 18 ರಂದು, ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ,  ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ,  ಸೆಕ್ಷನ್ 144 ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸಹ ಸೂಚಿಸಲಾಗಿದೆ.