ಜೂ.29: ಉಡುಪಿಯಲ್ಲಿ‌ಉಚಿತ ಗಿಡ ವಿತರಣೆ

ಉಡುಪಿ, ಜೂ.28: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಬಹುಮತದಿಂದ ಗೆಲುವು ಸಾಧಿಸಿದ ಶೋಭಾ ಕರಂದ್ಲಾಜೆ ಸಂಭ್ರಮದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಉಚಿತ ಗಿಡ ವಿತರಣೆ ಕಾರ್ಯಕ್ರಮ ಜೂ. 29ರಂದು, ಸಂಜೆ 4 ಗಂಟೆಗೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ನಡೆಯಲಿದೆ ಎಂದು ಅಲ್ಪಸಂಖ್ಯಾತ ಮೋರ್ಚಾದ ಪ್ರ. ಕಾರ್ಯದರ್ಶಿ ಮೊಹಮ್ಮದ್ ಆರೀಫ್ ತಿಳಿಸಿದ್ದಾರೆ.