ಜೂನ್ 5: ವಿಶ್ವ ಪರಿಸರ ದಿನಾಚರಣೆ

ಉಡುಪಿ, ಜೂನ್ 4: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕರಾವಳಿ ನಿಯಂತ್ರಣ ಪ್ರಾಧಿಕಾರ ಹಾಗೂ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಜಾಥಾ ಮತ್ತು ಸಭಾ ಕಾರ್ಯಕ್ರಮವು ಜೂನ್ 5 ರಂದು ಬೆಳಗ್ಗೆ 10 ಗಂಟೆಗೆ ಪಡುಬಿದ್ರಿಯ ಶ್ರೀ ರಮೇಶ್ ಮಹಾಬಲ ಶೆಟ್ಟಿ ಸಭಾಭವನ (ಬಂಟರ ಭವನ)ದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಷಿ ಉದ್ಘಾಟಿಸಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ  ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಹೆಜಮಾಡಿ ಟೋಲ್‍ನಿಂದ ಪಡುಬಿದ್ರಿ ರಮೇಶ್ ಮಹಾಬಲ ಶೆಟ್ಟಿ ಸಭಾಂಗಣದವೆರೆಗೆ ಪರಿಸರ ಜಾಥಾ  ಮತ್ತು ಹೆಜಮಾಡಿ ಕ್ರೀಡಾಂಗಣದಲ್ಲಿ  ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ.