ದಾವಣಗೆರೆ: ‘ಜೂನಿಯರ್ ರಾಜ್ಕುಮಾರ್’ ಎಂದೇ ಪ್ರಸಿದ್ಧರಾಗಿದ್ದ ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕಲಾವಿದ ಕೊಡಗನೂರು ಜಯಕುಮಾರ್ (72) ಅವರು ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ತಿಂಗಳುಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಚೇತರಿಸಿಕೊಂಡಿದ್ದ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.
ಅವರಿಗೆ ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.