ಜಸ್ಟಿಸ್ ಡಿವೈ ಚಂದ್ರಚೂಡ್ ಸುಪ್ರೀಂಕೋರ್ಟಿನ ಮುಂದಿನ ಮುಖ್ಯನ್ಯಾಯಮೂರ್ತಿ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಿದ್ದಾರೆ. ಅವರು ಮಂಗಳವಾರ ಬೆಳಗ್ಗೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರವನ್ನು ಹಸ್ತಾಂತರಿಸಿ, ಅವರನ್ನು ಮುಂದಿನ ಸಿಜೆಐ ಎಂದು ಗೊತ್ತುಪಡಿಸಿದರು. ಸುಪ್ರೀಂ ಕೋರ್ಟ್‌ನ ಇತರ ನ್ಯಾಯಾಧೀಶರ ಸಮ್ಮುಖದಲ್ಲಿ ಪತ್ರವನ್ನು ಹಸ್ತಾಂತರಿಸಲಾಯಿತು.

ನ್ಯಾಯಮೂರ್ತಿ ಲಲಿತ್ ಅವರು ಈ ವಿಷಯದ ಬಗ್ಗೆ ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆಯಲಿದ್ದಾರೆ. ನವೆಂಬರ್ 8 ರಂದು ನಿವೃತ್ತಿಯಾಗಲಿರುವ ಅವರು ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕೇಂದ್ರ ಸರ್ಕಾರ ಕಳೆದ ವಾರ ಕೇಳಿತ್ತು. ನ್ಯಾಯಮೂರ್ತಿ ಎನ್‌ವಿ ರಮಣ ಅವರ ಉತ್ತರಾಧಿಕಾರಿಯಾಗಿ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ತಮ್ಮ 74 ದಿನಗಳ ಅಧಿಕಾರಾವಧಿ ಪೂರ್ಣಗೊಳಿಸಲಿದ್ದಾರೆ.

ಸುಪ್ರೀಂ ಕೋರ್ಟ್ ತನ್ನ 50 ನೇ ಮುಖ್ಯ ನ್ಯಾಯಾಧೀಶರಾಗಿ ಡಿವೈ ಚಂದ್ರಚೂಡ್ ಅವರನ್ನು ಸ್ವಾಗತಿಸಲಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ. ಸಂಪ್ರದಾಯದಂತೆ, ಹಿರಿತನದ ಆಧಾರದಲ್ಲಿ ಮುಖ್ಯ ನಾಯಮೂರ್ತಿಯ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.