ಕೆ.ವಿ. ಗಣಪಯ್ಯ, ನೀವಣಿ ಗಣೇಶ ಭಟ್ಟರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗ ಕೊಡಮಾಡುವ 2019ನೇ ಸಾಲಿನ ಮಟ್ಟಿ ಮುರಳಿಧರ ರಾವ್‌ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಹಾಗೂ ಹಿರಿಯ ಅರ್ಥಧಾರಿ ಪೆರ್ಲ ಕೃಷ್ಣ ಭಟ್‌ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಹಿರಿಯ ಅರ್ಥಧಾರಿ ಹರಿದಾಸ ನೀವಣೆ ಗಣೇಶ್‌ ಭಟ್‌ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ‌ ಸಮಾರಂಭ ಮೇ. ೨೫ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. 
ಪ್ರಶಸ್ತಿಗಳು ೨೦ ಸಾವಿರ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿವೆ ಎಂದು ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್‌ ರಾವ್‌ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.