udupixpress
Home Trending ಸಾಣೂರು ಯುವಕ ಮಂಡಲದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಸಾಣೂರು ಯುವಕ ಮಂಡಲದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಕಾರ್ಕಳ: ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ‘ಫಿಟ್ ಇಂಡಿಯಾ ಸರಣಿ ಕಾರ್ಯಕ್ರಮ’ ಅಂಗವಾಗಿ ಸಾಣೂರು ಗ್ರಾಮದ ಯುವಕರಿಗೆ ಯುವಕ ಮಂಡಲದ ಮೈದಾನದಲ್ಲಿ ಭಾನುವಾರ ಕಬಡ್ಡಿ ಪಂದ್ಯಾಟ ಹಮ್ಮಿಕೊಳ್ಳಲಾಯಿತು.

ಜಿಪಂ ಸದಸ್ಯೆ ದಿವ್ಯಶ್ರೀ ಗಿರೀಶ್ ಅಮೀನ್ ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು.

ಸಾಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ, ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ ಸಾಮಾಜಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ಪ್ರಕಾಶ್ ಮಡಿವಾಳ ಶಂಕರ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಶ್ರೇಯಸ್ ಶೆಟ್ಟಿ, ಭಾಸ್ಕರ್ ಪೂಜಾರಿ, ಭಾರ್ಗವಿ ಕನ್ಸ್ಟ್ರಕ್ಷನ್ ಸಾಣೂರು ಪ್ರಕಾಶ್ ರಾವ್, ರಾಜೇಶ್ ಹರೀಶ್ ರಾವ್ ಉಪಸ್ಥಿತರಿದ್ದರು.

ಮಂಡಲದ ಕಾರ್ಯದರ್ಶಿ ಮೋಹನ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಾಣೂರು ಗ್ರಾಮದ 8 ತಂಡಗಳು ಪಂದ್ಯಾಟದಲ್ಲಿ ಭಾಗಿವಹಿಸಿದ್ದವು.