ಮಂಗಳೂರು: ಜು. 26: ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಕೋಡಿಂಬಾಳ ಗ್ರಾಮದ ಕುಕ್ಕರೆಬೆಟ್ಟು ನಿವಾಸಿ ವೀಣಾ (43) ಗುರುವಾರ ಮೃತಪಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ, ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅವರ ದೇಹದಲ್ಲಿ ಬಿಳಿರಕ್ತದ ಕಣ ಕಡಿಮೆಯಾಗಿತ್ತು. ಪ್ರಾರಂಭದಲ್ಲಿ ವೀಣಾ ಅವರಿಗೆ ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ.
ಕಡಬದ ಕೋಡಿಂಬಾಳ ಪರಿಸರದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿರುವ ಶಂಕೆ ವ್ಯಕ್ತವಾಗಿದ್ದು,
ಜ್ವರದಿಂದ ಆಸ್ಪತ್ರೆ ಓರ್ವ ಬಾಲಕ ಮತ್ತು ಇಬ್ಬರು ಮಹಿಳೆಯರು ಆಸ್ಪತ್ರೆ ಸೇರಿದ್ದಾರೆ.