ಉಡುಪಿ: ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಅಂಗವಾಗಿ ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಸ್ಯತ್ವ ನೋಂದಾವಣೆಗೆ ಕಡೆಕಾರು ಬಿಜೆಪಿ ಸ್ಥಾನೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸನಿಲ್ ಇವರ ಮನೆಯ ವಠಾರದಲ್ಲಿ ಗಿಡ ನೆಡುವ ಮೂಲಕ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಸಂಚಾಲಕ ವಿಜಯ ಕೊಡವೂರು ಇವರು ಅಭಿಯಾನದ ಬಗ್ಗೆ ಮಾರ್ಗದರ್ಶನ ಹಾಗೂ ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ರಾಜೇಂದ್ರ ಪಂದುಬೆಟ್ಟು, ಶಿಲ್ಪಾ ಆರ್. ಕೋಟ್ಯಾನ್, ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ರಘುನಾಥ್ ಕೋಟ್ಯಾನ್, ಉಪಾಧ್ಯಕ್ಷೆ ಮಾಲತಿ, ಸದಸ್ಯರಾದ ಪ್ರದೀಪ್ ಚಂದ್ರ ಕುತ್ಪಾಡಿ, ರಾಘವೇಂದ್ರ ಕುತ್ಪಾಡಿ, ಸಬಿತಾ ಬಿ. ಸುವರ್ಣ, ಮಹೇಶ್ ಕುಮಾರ್ ಕೆ. ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.