ಕಡಿಯಾಳಿ ತಿರುಗುವ ಮುಚ್ಚಿಗೆ ಖ್ಯಾತಿಯ ಕಾಷ್ಟಶಿಲ್ಪಿ ಸುದರ್ಶನ ಆಚಾರ್ಯರಿಗೆ ಕಾಷ್ಟಶಿಲ್ಪರತ್ನ ಪ್ರಶಸ್ತಿ

ಉಡುಪಿ: ಬೆಂಗಳೂರಿನ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ಯಲಹಂಕ ಇದರ ದಶಮಾನೋತ್ಸವದ ಪ್ರಯುಕ್ತ
ನವೆಂಬರ್ 6 ರವಿವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಭವನ ಯಲಹಂಕದಲ್ಲಿ “ವಿಕಾಸ ಸಂಭ್ರಮ-2022”
ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಸ್ಥೆಯು ನೀಡುವ ಕಾಷ್ಠಶಿಲ್ಪರತ್ನ ಪ್ರಶಸ್ತಿಗೆ ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆ ನಿರ್ಮಾತೃ ಖ್ಯಾತ ಕಾಷ್ಠಶಿಲ್ಪಿ, ರಥ ಶಿಲ್ಪಿ ಸುದರ್ಶನ ಆಚಾರ್ಯ ಆಯ್ಕೆಯಾಗಿದ್ದಾರೆ.

ಇವರೊಂದಿಗೆ ಕಾಷ್ಠಶಿಲ್ಪದಲ್ಲಿ ವಿಶೇಷ ಸಾಧನೆ ಮಾಡಿದ ಶಿಲ್ಪಿ ಚಂದ್ರಯ್ಯ ಆಚಾರ್ಯ ಕಳಿ, ಶಿಲ್ಪಿ ರಾಜಗೋಪಾಲ್ ಆಚಾರ್ಯ ಕೋಟೇಶ್ವರ, ಶಿಲ್ಪಿ ಹರೀಶ್ ಆಚಾರ್ಯ ಕಲ್ಲಮುಂಡ್ಕೂರು,
ಬಂಬ್ರಾಣ ಯಜ್ಞೇಶ್ ಆಚಾರ್ಯ ಮಂಗಳೂರು ಇವರಿಗೂ ಕಾಷ್ಠಶಿಲ್ಪರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಕಾಷ್ಠಶಿಲ್ಪ ಸಭಾದಮಾಜಿ ಅಧ್ಯಕ್ಷರಾದ ಹರಿಶ್ಚಂದ್ರ‌.ಎನ್‌.ಆಚಾರ್ಯ, ಮೋಹನ್.ಬಿ.ಆಚಾರ್ಯ, ಚಂದ್ರ ಆಚಾರ್ ಕೋಟೇಶ್ವರ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಪರಮಪೂಜ್ಯ ಶ್ರೀಮತ್
ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಉಡುಪಿ ಪೀಠಾಧೀಶ್ವರರು ಪರಮಪೂಜ್ಯ ಶ್ರೀಮತ್ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಮತ್ತು ಹಾಸನ ಅರೆಮಾದನಹಳ್ಳಿ ಮಹಾಸಂಸ್ಥಾನ ಮಠದ ಪೀಠಾಧೀಶ್ವರರಾದ ಪರಮಪೂಜ್ಯ ಅನಂತ ಶ್ರೀವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವ ವಿಕಾಸ ಸಂಭ್ರಮ-2022 ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ಅಧ್ಯಕ್ಷ ಎಮ್.ಜಿ.ನಾಗೇಶ್ ಆಚಾರ್ಯ ವಹಿಸಲಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ಜ್ಞಾನ ಪೀಠ, ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ದಶಮಾನೋತ್ಸವ ಸಂಭ್ರಮದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ.

ಉನ್ನತ ಶಿಕ್ಷಣ ಸಚಿವ ಮತ್ತು ರಾಮ ನಗರ ಉಸ್ತುವಾರಿ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಜ್ಯೋತಿಷಿ ಶ್ರೀ ಗುರೂಜಿ ಉಮೇಶ್ ಆಚಾರ್ಯ, ನಿಸಿಕಿ ಟೆಕ್ನಾಲಜಿ ಪ್ರೈ.ಲಿ ವ್ಯವಸ್ಥಾಪಕ ನಿರ್ದೇಶಕವಿಠಲ್ ಬೆಳಂದೂರು, ಜೋವಾಸ್ ಟೆಕ್ ಸೊಲ್ಯುಷನ್ಸ್ ವ್ಯವಸ್ಥಾಪಕ ನಿರ್ದೇಶಕ ರವಿರಾಜ್ ಎಲ್ಲಂಪಲ್ಲಿ, ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ಬೆಂಗಳೂರು ಇದರ ಸಂಸ್ಥಾಪಕ ಅಧ್ಯಕ್ಷ ಮತ್ತು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಂಚ ಸಿಂಹಾಸನ ವಿಕಾಸ ಸಮಿತಿ ಅಧ್ಯಕ್ಷ ಹರಿಶ್ಚಂದ್ರ.ಎನ್.ಆಚಾರ್ಯ ಮತ್ತು ದಕ್ಷಿಣ ಕನ್ನಡ ವಿಶ್ವಬ್ರಾಹ್ಮಣ ಸಂಘ ಯಲಹಂಕ ಬೆಂಗಳೂರು ಅಧ್ಯಕ್ಷ ತುಕಾರಾಮ ಆಚಾರ್ಯಉಪಸ್ಥಿತರಿರಲಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು,ಸಂಜೆ 6 ಗಂಟೆಯಿಂದ ಗಾನಸಾರಥಿ ಜನ್ಸಾಲೆ ರಾಘವೇಂದ್ರ ಆಚಾರ್ಯರವರ ಸಾರಥ್ಯದಲ್ಲಿ ಪೆರ್ಡೂರು ಮೇಳದ ಕಲಾವಿದರಿಂದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.