ಕಕ್ಯಪದವು: ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯುವ 2023-24ರ ಸಾಲಿನ ಮೊದಲ ಕಂಬಳ ಕೂಟವು ಬಂಟ್ವಾಳ ತಾಲೂಕಿನ ಕಕ್ಯಪದವಿನಲ್ಲಿ ನಡೆಯಿತು. ಮೈರಾ ಉಳಿಗ್ರಾಮದಲ್ಲಿ ಶನಿವಾರ ಮತ್ತು ಭಾನುವಾರ ನಡೆದ ‘ಸತ್ಯ – ಧರ್ಮ’ ಜೋಡುಕರೆ ಕಂಬಳ ಕೂಟದಲ್ಲಿ 189 ಜೊತೆ ಕೋಣಗಳು ಭಾಗವಹಿಸಿದ್ದವು.
11ನೇ ವರ್ಷದ ಕಕ್ಯಪದವು ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಐದು ಜೊತೆ ಕೋಣಗಳು, ಅಡ್ಡಹಲಗೆ ವಿಭಾಗದಲ್ಲಿ ಐದು ಜೊತೆ ಕೋಣಗಳು, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ 28 ಜೊತೆ ಕೋಣಗಳು, ಹಗ್ಗ ಕಿರಿಯ ವಿಭಾಗದಲ್ಲಿ 25 ಜೊತೆ ಕೋಣಗಳು ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 107 ಜೊತೆ ಕೋಣಗಳು ಭಾಗವಹಿಸಿದ್ದವು.
ಕಕ್ಯಪದವು ಸತ್ಯ-ಧರ್ಮ ಜೋಡುಕರೆ ಕಂಬಳದ ಫಲಿತಾಂಶ
ಕನೆಹಲಗೆ ವಿಭಾಗ:
ಪ್ರಥಮ: ನೇರಳೆಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ
ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ಅಲ್ಲಿಪಾದೆ ಕೆಳಗಿನ ಮನೆ ವಿನ್ಸೆಂಟ್ ಪಿಂಟೋ
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ನಾರಾವಿ ರಕ್ಷಿತ್ ಯುವರಾಜ್ ಜೈನ್
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಬಿ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ಹಗ್ಗ ಕಿರಿಯ
ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ “ಎ”
ಓಡಿಸಿದವರು: ಮಾಳ ಆದಿಶ್ ಪೂಜಾರಿ
ದ್ವಿತೀಯ: ಕಾರ್ಕಡ ಪುಟ್ಟು ಹೊಳ್ಳರಮನೆ ನಟರಾಜ ಹೊಳ್ಳ ಸಾಲಿಗ್ರಾಮ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ನೇಗಿಲು ಹಿರಿಯ
ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರುಚರಣ್
ನೇಗಿಲು ಕಿರಿಯ
ಪ್ರಥಮ: ಪಣೋಳಿಬೈಲು ಭಂಡಾರದ ಮನೆ ಶಿವಾನಂದ ಕುಲಾಲ್
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ದಿನೇಶ್ ಭಂಡಾರಿ
ಓಡಿಸಿದವರು: ಭಟ್ಕಳ ಶಂಕರ್