ಕೊಡವೂರು ಕಲ್ಮಾಡಿ ಗ್ರಾಮದ ನಿವಾಸಿ ನಾಪತ್ತೆ

ಉಡುಪಿ: ನಗರದ ಕೊಡವೂರು ಕಲ್ಮಾಡಿ ಗ್ರಾಮದ ನಿವಾಸಿ ರವಿಕುಮಾರ್ (44) ಎಂಬ ವ್ಯಕ್ತಿಯು ಜನವರಿ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಮಲ್ಪೆ ಪಿಎಸ್‌ಐ ಮೊ.ಸಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.