ಡಿ.2 ರಂದು ಎಂಜಿಎಂ ಕಾಲೇಜಿನಲ್ಲಿ ಕನಕ ಗಾಯನ ಸ್ಪರ್ಧೆ

ಉಡುಪಿ: ಕನಕದಾಸ ಅಧ್ಯಯನ ಸಂಶೋಧನ ಪೀಠ, ಕನಕದಾಸ ಸಂಗೀತೋತ್ಸವ ಸಮಿತಿ, ಮಾಹೆ, ಎಂಜಿಎಂ ಕಾಲೇಜು ಹಗೂಸರಿಗಮ ಭಾರತಿ ಸಂಗೀತ ವಿದ್ಯಾಲಯ ಜಂಟಿ ಸಹಯೋಗದಲ್ಲಿ 44 ನೆಯ ವಾದಿರಾಜ ಕನಕದಾಸ ಸಂಗೀತೋತ್ಸವ ಕಾರ್ಯಕ್ರಮವು ಡಿ.9 ಮತ್ತು 10 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಟಪದಲ್ಲಿ ನಡೆಯಲಿದೆ. ಆ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕನಕ ಗಾಯನ ಸ್ಪರ್ಧೆಯು ಡಿ.3 ರಂದು ಮಧ್ಯಾಹ್ನ 2 ಗಂಟೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿಯಲ್ಲಿ ನಡೆಯಲಿದೆ.

ಸ್ಪರ್ಧಾಳುಗಳು ವಾದಿರಾಜರ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿದ್ದು, ತೀರ್ಪುಗಾರರು ಕೇಳುವ ನಾಲ್ಕು ಕೀರ್ತನೆಗಳಲ್ಲಿ ಯಾವುದಾದರೂ ಒಂದು ಕೀರ್ತನೆಯನ್ನು ಹಾಡಲು ಶಕ್ತರಿರಬೇಕು. ಭಾಗವಹಿಸಲು ಇಚ್ಚಿಸುವವರು ಕಡ್ಡಾಯವಾಗಿ ತಮ್ಮ ಹೆಸರು ಮತ್ತು ವಿಳಾಸವನ್ನು ಡಿ.1 ರ ಒಳಗಾಗಿ ಆಡಳಿತಾಧಿಕಾರಿಗಳು, ಕನಕದಾಸ ಅಧ್ಯಯನ ಸಂಶೋಧನ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂಜಿಎಂ ಕಾಲೇಜು ಆವರಣ ಉಡುಪಿ–102 ಈ ವಿಳಾಸಕ್ಕೆ ಕಳುಹಿಸಬೇಕು. ಸ್ಥಳದಲ್ಲೇ ನೋಂದಣಿ ವ್ಯವಸ್ಥೆ ಇರುವುದಿಲ್ಲ ಎಂದು ಕನಕದಾಸ ಅಧ್ಯಯನ ಸಂಶೋಧನ ಪೀಠದ ಆಡಾಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.