ಉಡುಪಿ: ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸಂಘ(ರಿ) ಉಡುಪಿ ಇವರ ಸಹಯೋಗದಲ್ಲಿ ಭಕ್ತ ಕನಕದಾಸರ 536 ನೇ ಜಯಂತಿ ಮಹೋತ್ಸವದ ಸಭಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿಜಿಗಳು ಉದ್ಘಾಟಿಸಿ, ಪಾಳೇಗಾರರಾಗಿದ್ದ ತಿಮ್ಮಪ್ಪ ನಾಯಕ ಲೌಕಿಕ ಸುಖಗಳನ್ನು ತೊರೆದು ದೇವರ ದಾಸರಾಗಿ ದಾಸ ಸಾಹಿತ್ಯಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ತತ್ವಜ್ಞಾನಿ ಭಕ್ತಕನಕದಾಸರು ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದು ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿಯ ಶ್ರೀಕೃಷ್ಣನ ಭಕ್ತರು ಎಂದು ಅನುಗ್ರಹ ಸಂದೇಶ ನೀಡಿದರು.
ಸಭೆಯಲ್ಲಿ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.