ಕುಂದಾಪುರ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದ್ದ ಕಾಂತಾರ ಚಿತ್ರದ ಪ್ರೀಕ್ವಲ್ ಚಿತ್ರೀಕರಣ ಪ್ರಾರಂಭವಾಗಿದೆ ಎಂದು ವರದಿಯಾಗಿದೆ.
ನಟ ನಿರ್ದೇಶಕ ರಿಷಬ್ ಶೆಟ್ಟಿ ಸದ್ದಿಲ್ಲದೇ ಕಾಂತಾರ 1 ಚಲನಚಿತ್ರದ ಚಿತ್ರೀಕರಣ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಕುಂದಾಪುರದ ಕೆರಾಡಿಯಲ್ಲಿ ಹಾಕಿರುವ ಸೆಟ್ ನಲ್ಲೇ ಚಿತ್ರೀಕರಣ ನಡೆಯಲಿದೆ.
ಈ ಸಿನಿಮಾದಲ್ಲಿ ರಾಜನ ಪಾತ್ರವನ್ನು ಮಾಡುತ್ತಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಕಲ್ಲುರ್ಟ್ಟಿ ದೈವದ ಸನ್ನಿಧಿಯಲ್ಲಿ ಪ್ರಾರ್ಥಿಸಿದ್ದಾರೆ. ಸಿನಿಮಾ ಕುರಿತಂತೆ ದೈವ ಅವರಿಗೆ ಅಭಯ ನೀಡಿದೆ ಎಂದು ವರದಿ ಹೇಳಿದೆ.












