ಗಣರಾಜ್ಯೋತ್ಸವ ಅಂಗವಾಗಿ ಶೇ.50 ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ 2023 ರ ಜನವರಿ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‌ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಸಹ ಪಡೆಯಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.