ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

ಜನಪ್ರಿಯ ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ಇಂದು ಬುಲೆಟ್ ಪ್ರಕಾಶ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.