ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಧ್ವಜಾರೋಹಣ ಮಾಡಿದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲ್, ಪ್ರಭಾರಿ ಜಿಲ್ಲಾಧಿಕಾರಿ ಆರ್.ಕುಮಾರ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ವೈ ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ಯು ಟಿ ಖಾದರ್, ತುಳು ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಮತ್ತಿತರರು ಉಪಸ್ಥಿತರಿದ್ದರು.