ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕಾಲೇಜಿನ ಆವರಣದಲ್ಲಿ ಕನ್ನಡ ಗೀತಗಾಯನ
ಕಾರ್ಯಕ್ರಮವು ಈ ಸಂದರ್ಭದಲ್ಲಿ ಜರುಗಿತು.

ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು. ಕನ್ನಡ ರಾಜ್ಯೋತ್ಸವದ
ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಶುಭಾಷಣ ಸ್ಪರ್ಧೆ ಮತ್ತು ಕನ್ನಡ ಕವಿತೆ ರಚನೆ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ವಿಜೇತ
ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಇವರು ಬಹುಮಾನ ವಿತರಿಸಲಾಯಿತು.

ಕಾಲೇಜಿನ ಶೈಕ್ಷಣಿಕ ಡೀನ್ ಡಾ. ನಾಗರಾಜ ಭಟ್ ಮತ್ತು ಡೀನ್ (ಆಂತರಿಕ ಗುಣಮಟ್ಟ) ಡಾ. ಸುದರ್ಶನ್ ರಾವ್, ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ
ಸಾಕ್ಷಿಯಾದರು.