ಮಂಗಳೂರು: ಬ್ಯಾಂಕ್ ಆಫ್ ಬರೋಡಾ, ವಲಯಕಛೇರಿ, ಮಂಗಳೂರು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ನಿವೃತ್ತ ಪ್ರಾಧ್ಯಾಪಕ ಡಾ. ಎಸ್. ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಆಗಮಿಸಿ ಕನ್ನಡ ಭಾಷೆಯ ಸಾಹಿತ್ಯ ಶ್ರೀಮಂತಿಕೆಯ ಬಗ್ಗೆ ಮಾತನಾಡಿದರು. ಮಾತೃಭಾಷೆಯನ್ನು ಮುಂದಿನ ಪೀಳಿಗೆಗಳವರೆಗೂ ಉಳಿಸಿ ಬೆಳೆಸಿಕೊಂಡು ಬರುವಂತೆ ಹಾಗೂ ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ತನ್ನದೇ ಆದ ಮಹತ್ವವಿರುವುದರಿಂದ ಬೇರೆ ಭಾಷೆಗಳನ್ನೂಕಲಿಯುವಂತೆ ಕರೆ ನೀಡಿದರು.
ವಲಯ ಕಛೇರಿ ಮುಖ್ಯಸ್ಥೆ ಗಾಯತ್ರಿ ಆರ್‌ಮಾತನಾಡಿ ನಮ್ಮ ದೇಶದಲ್ಲಿ ಸುಮಾರು ಸಾವಿರಕ್ಕೂ ಮಿಕ್ಕಿ ಭಾಷೆಗಳಿರುವುದರಿಂದ ನಮ್ಮ ಕೆಲಸದ ನಡುವೆ ಸಮಯ ಮಾಡಿಕೊಂಡು ಹೊಸ ಭಾಷೆಗಳನ್ನು ಕಲಿಯಬಹುದು ಎಂದರು.
ಪ್ರಾದೇಶಿಕ ಕಛೇರಿಯ ಮುಖ್ಯಸ್ಥ ಎಮ್. ಶಿವಪ್ರಸಾದ್ ವೆಂಕಟ್ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಪ್ರಾರ್ಥನೆ, ಭಾಷಣ, ವಿಜೇತರಿಗೆ ಪ್ರಮಾಣಪತ್ರ ವಿತರಣೆ ಜರಗಿತು.