ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಕ ಮಿರ್ಜಾ ಇಸ್ಮಾಯಿಲ್ ಜನ್ಮ ದಿನಾಚರಣೆ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಮಿರ್ಜಾ ಇಸ್ಮಾಯಿಲ್ ಇವರ ಹುಟ್ಟು ಹಬ್ಬವನ್ನು ಮಂಗಳವಾರ ಉಡುಪಿಯ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಆಚರಿಸಲಾಯಿತು.

ಮಿರ್ಜಾ ಇಸ್ಮಾಯಿಲ್ ಅವರ ಮಾನವೀಯ ಗುಣಗಳನ್ನು ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕಾರ್ಯದರ್ಶಿ ಆನಂದ್ ಪಿ, ಹಾಗೂ ನರಸಿಂಹಮೂರ್ತಿಯವರು ಕೊಂಡಾಡಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಭಿಯಂತರ ಶ್ರೀನಾಥ್  ಭಾಗವಹಿಸಿದ್ದರು.

ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು.

ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ,ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ದರ್ಸೆ, ಕಸಾಪ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಭಂಡಾರಿ, ತಾಲೂಕು ಕೋಶಾಧ್ಯಕ್ಷ ರಾಜೇಶ್ ಭಟ್ಪ ಪಣಿಯಾಡಿ , ಸುಭೋದ್ ಕುಮಾರ್, ಶಶಿಕಾಂತ್ ಶೆಟ್ಟಿ, ಈರಣ್ಣ ಕುರುವತ್ತಿ ಗೌಡ ಉಪಸ್ಥಿತರಿದ್ದರು.

ಆನಂದ್ ಪಿ. ಸ್ವಾಗತಿಸಿದರು, ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ .ಪಿ ವಂದಿಸಿದರು.