ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯ 5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ನವೆಂಬರ್ 1 ರಂದು ಮಧ್ಯಾಹ್ನ 1.30 ಕ್ಕೆ ನಗರದ ಬ್ರಹ್ಮಗಿರಿ ಜಿಲ್ಲಾ ಬಾಲಭವನದಲ್ಲಿ ಕನ್ನಡ ಗೀತೆ ಸ್ಪರ್ಧೆ ನಡೆಯಲಿದೆ.
ಸ್ಪರ್ಧೆಯಲ್ಲಿ ಕನ್ನಡ ನಾಡಿನ ಕವಿ, ಸಾಹಿತಿಗಳಿಂದ ರಚಿಸಲ್ಪಟ್ಟ ಕನ್ನಡ ನಾಡಿಗೆ ಸಂಬಂಧಿಸಿದ ಸುಗಮ ಸಂಗೀತ ಹಾಗೂ ಸಿನಿಮಾ ಗೀತೆಗಳನ್ನು ಹಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.